ಏಳು ಮಂದಿಯ ಹತ್ಯೆ ಪ್ರಕರಣ; ಇಬ್ಬರ ಶವ ಪತ್ತೆ

ಸಕಲೇಶಪುರ: ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಸಮೀಪದ ಕಂದಕಕ್ಕೆ ಎಸೆಯಲಾಗಿದ್ದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.ನಂತರ ಮೃತದೇಹಗಳನ್ನು ಅಂಬ್ಯುಲೆನ್ಸ್ ಮೂಲಕ ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಇದಕ್ಕೂ ಒಂದು ಗಂಟೆ ಮುಂಚಿತವಾಗಿ ಆರೋಪಿ ಇಂದುಶೇಖರ್ನನ್ನು ಪೊಲೀಸರು ಸ್ಥಳದಿಂದ ಕರೆದೊಯ್ದಿದ್ದರು. ಮೃತರ ಕುಟುಂಬಸ್ಥರು ಅಂಬ್ಯುಲೆನ್ಸ್ ಹಿಂಬಾಲಿಸಿ ಆಸ್ಪತ್ರೆಯತ್ತ ತೆರಳಿದರು.